ಲಯನ್ಸ್ ಕ್ಲಬ್ ವತಿಯಿಂದ ಮೇ 24ರಂದು ಉಚಿತ ನೇತ್ರ ತಪಾಸಣಾ ಶಿಬಿರ

Published on

ಹಾವೇರಿ: ಲಯನ್ಸ್ ಕ್ಲಬ್ ವತಿಯಿಂದ ಮೇ 24ರಂದು ಬೆಳಗ್ಗೆ 9ರಿಂದ 1 ಗಂಟೆವರೆಗೆ ನಗರದ ಹುಕ್ಕೇರಿ ಮಠದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ ಆಯೋಜಿಸಲಾಗಿದೆ. ಜಿಲ್ಲಾ ಅಂದತ್ವ ನಿವಾರಣಾ ಸಂಸ್ಥೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಸ್ಪತ್ರೆ, ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ, ಕಂಚಿಕಾಮಕೋಟಿ ಮೆಡಿಕಲ್ ಟ್ರಸ್ಟ್, ಶಂಕರ ಕಣ್ಣಿನ ಆಸ್ಪತ್ರೆ ಶಿವಮೊಗ್ಗ ಹಾಗೂ ಹುಕ್ಕೇರಿಮಠದ ಸಹಯೋಗದಲ್ಲಿ ಶಿಬಿರ ಆಯೋಜಿಸಲಾಗಿದೆ.

ಖ್ಯಾತ ನೇತ್ರ ತಜ್ಞರು ಶಿಬಿರದಲ್ಲಿ ಪಾಲ್ಗೊಳ್ಳಲಿದ್ದು, ಹಾವೇರಿ ಜಿಲ್ಲೆಯ ಹಾಗೂ ಎಲ್ಲ ತಾಲೂಕಿನ ಸುತ್ತಮುತ್ತಲಿನ ಗ್ರಾಮಸ್ಥರು, ಸಾರ್ವಜನಿಕರು ಶಿಬಿರದ ಸದುಪಯೋಗ ಪಡಿಸಿಕೊಳ್ಳಬೇಕು. ಭಾಗವಹಿಸುವವರು ಕಡ್ಡಾಯವಾಗಿ 2 ಪಾಸ್‌ಪೋರ್ಟ್ ಸೈಜ್ ಫೋಟೊದೊಂದಿಗೆ ಆಧಾರ್ ಕಾರ್ಡ್ ಅಥವಾ ವೋಟರ್ ಐಡಿ ಝರಾಕ್ಸ್ ಪ್ರತಿಗಳನ್ನು ತರಬೇಕು. ಜತೆಗೆ ಸಹಾಯಕರನ್ನು ಕರೆತರಬೇಕು. ಶಸ್ತ್ರಚಿಕಿತ್ಸೆಗೆ ಆಯ್ಕೆಯಾದವರಿಗೆ, ಅಂದೇ ದಿನಾಂಕವನ್ನು ತಿಳಿಸಲಾಗುವುದು ಎಂದು ಹಾವೇರಿ ಲಯನ್ಸ್ ಕ್ಲಬ್ ಅಧ್ಯಕ್ಷ ಸುಭಾಷ ಹುಲ್ಯಾಳದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net