ಸುವರ್ಣ ಸಂಭ್ರಮ ಕಚೇರಿ ಉದ್ಘಾಟನೆ ಸೆ.8ರಂದು

Published on

ಹಾವೇರಿ: ಡಿಸೆಂಬರ್‌ನಲ್ಲಿ ಆಯೋಜಿಸಿರುವ ಹುಕ್ಕೇರಿಮಠದ ಶಿವಬಸವೇಶ್ವರ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಸುವರ್ಣ ಮಹೋತ್ಸವ ಸಮಾರಂಭದ ಕಾರ್ಯಾಲಯದ ಉದ್ಘಾಟನೆ ಸಮಾರಂಭ ಸೆ.8ರಂದು 10 ಗಂಟೆಗೆ ಹುಕ್ಕೇರಿಮಠ ಪ್ರೌಢಶಾಲೆಯಲ್ಲಿ ನಡೆಯಲಿದೆ. ಶಾಲೆಯ ಹಳೆಯ ವಿದ್ಯಾರ್ಥಿ ಹಾಗೂ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಕಾರ್ಯಾಲಯ ಉದ್ಘಾಟಿಸುವರು. ಹುಕ್ಕೇರಿಮಠದ ಶ್ರೀ ಸದಾಶಿವ ಸ್ವಾಮೀಜಿ ಸಾನ್ನಿಧ್ಯ ವಹಿಸುವರು ಎಂದು ಸುವರ್ಣ ಸಂಭ್ರಮ ಆಚರಣೆ ಸಮಿತಿಯ ಅಧ್ಯಕ್ಷ ಮಹೇಶ ಚಿನ್ನಿಕಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net