

ಹಾವೇರಿ: ಹುಕ್ಕೇರಿ ಮಠದ ಲಿಂ.ಶಿವಲಿಂಗ ಸ್ವಾಮೀಜಿಯವರ 108ನೇ ಜಯಂತಿ ಮಹೋತ್ಸವ ಶ್ರೀಮಠದ ಶಿವಾನುಭವ ಮಂಟಪದಲ್ಲಿ ಮಾ.3ರಂದು ಬೆಳಗ್ಗೆ 10.30ಕ್ಕೆ ನಡೆಯಲಿದೆ.
ಶ್ರೀ ಸದಾಶಿವ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ರಟ್ಟಿಹಳ್ಳಿಯ ಕಬ್ಬಿಣಕಂತಿಮಠದ ಶ್ರೀ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಅಧ್ಯಕ್ಷತೆ ವಹಿಸುವರು. ಲೇಖಕ ಹನುಮಂತಗೌಡ ಗೊಲ್ಲರ, ಉದ್ಯಮಿ ಕೆ.ಮಂಜಪ್ಪ, ಇತರರು ಭಾಗವಹಿಸುವರು. ಮಠದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಶ್ರೀ ಮಠದ ಪ್ರಕಟಣೆ ತಿಳಿಸಿದೆ.