ಹಾವೇರಿ: ತಾಲೂಕಿನ ಹುಲಗೂರ ಗ್ರಾಮದ ಸೈಯದ್ ಹಜರತ್ ಷಾ ಖಾದ್ರಿ ದರ್ಗಾಕ್ಕೆ ನ.29ರಂದು ಬೆಳಗ್ಗೆ 10.30ಕ್ಕೆ ಲೊಕೊಪಯೋಗಿ ಸಚಿವ ಸತೀಶ ಜಾರಕಿಹೊಳಿ, ವಸತಿ ಮತ್ತು ವಕ್ಫ್ ಸಚಿವ ಜಮಿರ್ ಅಹ್ಮದ್ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಲಿದ್ದಾರೆ.
ನಂತರ ಹೆಸ್ಕಾಂ ನಿಗಮದ ನೂತನ ಅಧ್ಯಕ್ಷ ಸೈಯದ್ ಅಜಿಮ್‌ಪೀರ್ ಖಾದ್ರಿ ನಿವಾಸಕ್ಕೆ ಭೇಟಿ ನೀಡಿ, ಹುಬ್ಬಳ್ಳಿಯಲ್ಲಿ ಹೆಸ್ಕಾಂ ಅಧ್ಯಕ್ಷರ ನೂತನ ಕಚೇರಿ ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ, ವಿಧಾನಸಭಾ ಉಪ ಸಭಾಪತಿ ರುದ್ರಪ್ಪ ಲಮಾಣಿ, ಶಾಸಕರಾದ ಬಸವರಾಜ ಶಿವಣ್ಣನವರ, ಯು.ಬಿ.ಬಣಕಾರ, ಶ್ರೀನಿವಾಸ ಮಾನೆ, ಪ್ರಕಾಶ ಕೋಳಿವಾಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪ್ರೇಮಾ ಪಾಟೀಲ, ಇತರರು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.