ಸೌಹಾರ್ದ ಮಾನವ ಸರಪಳಿ 30ರಂದು

Published on

ಹಾವೇರಿ: ಸೌಹಾರ್ದ ಕರ್ನಾಟಕ, ಪ್ರಗತಿಪರ ಸಂಘಟನೆಗಳು, ಸಮಾನ ಮನಸ್ಕರ ಸಂಘಟನೆಗಳ ವತಿಯಿಂದ ಮಹಾತ್ಮ ಗಾಂಧೀಜಿ ಅವರು ಹುತಾತ್ಮರಾದ ದಿನ ಜ.30ರಂದು ಬೆಳಗ್ಗೆ 10.30ಕ್ಕೆ ನಗರದಲ್ಲಿ ಸೌಹಾರ್ದ ಮಾನವ ಸರಪಳಿ ರಚಿಸಲಾಗುವುದು.
ಗಾಂಧಿ ವೃತ್ತದಲ್ಲಿರುವ ಮಹಾತ್ಮ ಗಾಂಧೀಯವರ ಮೂರ್ತಿಗೆ ಮಾಲಾರ್ಪಣೆ ಮಾಡಿ, ನಂತರ ಭಾವೈಕ್ಯ ಮೆರವಣಿಗೆಯ ಮೂಲಕ ಹೊಸಮನಿ ಸಿದ್ದಪ್ಪ ವೃತ್ತಕ್ಕೆ ತೆರಳಿ ಮಾನವ ಸರಪಳಿ ನಿರ್ಮಿಸಲಾಗುವುದು ಎಂದು ಸಾಹಿತಿ ಸತೀಶ ಕುಲಕರ್ಣಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net