ಐಎಎಸ್, ಕೆಎಎಸ್ ಪ್ರವೇಶ ಪರೀಕ್ಷೆ 8ರಂದು

Published on

ಹಾವೇರಿ: ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ನಡೆಸುವ ಐಎಎಸ್ ಹಾಗೂ ಕೆಎಎಸ್ ಪರೀಕ್ಷಾ ಪೂರ್ವಭಾವಿ ತರಬೇತಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ ಅ.8ರಂದು ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆಯಲಿದೆ. ನಗರದ ಡಿಸಿ ಆಫೀಸ್ ರಸ್ತೆಯ ನಂದಿ ಲೇಔಟ್‌ನಲ್ಲಿರುವ ಮೌಲಾನಾ ಆಜಾದ್ ಮಾದರಿ ಶಾಲೆಯಲ್ಲಿ ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net