ಅಂತರ್ ಕಾಲೇಜು ಚರ್ಚಾ ಸ್ಪರ್ಧೆ ನಾಳೆ

Published on

ಹಾವೇರಿ: ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನಾಚರಣೆ ಅಂಗವಾಗಿ ಅಂತರ್ ಕಾಲೇಜು ಚರ್ಚಾ ಸ್ಪರ್ಧೆ ಅ.18ರಂದು ಬೆಳಗ್ಗೆ 10 ಗಂಟೆಗೆ ಹಂಸಭಾವಿ ರೂರಲ್ ಪಾಲಿಟೆಕ್ನಿಕ್‌ನಲ್ಲಿ ಆಯೋಜಿಸಲಾಗಿದೆ.
ರಕ್ತದಾನದ ಮಹತ್ವ ಚರ್ಚಾ ಸ್ಪರ್ಧೆಯ ವಿಷಯವಾಗಿದೆ. ಪ್ರಥಮ ಬಹುಮಾನ 1,000 ರೂ. ಹಾಗೂ ಎರಡನೇ ಬಹುಮಾನ 500 ರೂ. ನೀಡಲಾಗುವುದು. ಅದೇ ದಿನ ಜಿಲ್ಲಾ ಮಟ್ಟದ ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ-2023 ವೇದಿಕೆ ಕಾರ್ಯಕ್ರಮ ಜರುಗಲಿದೆ. ಈ ಕಾರ್ಯಕ್ರಮದಲ್ಲಿ ಚರ್ಚಾ ಸ್ಪರ್ಧೆಯ ವಿಜೇತರಿಗೆ ಪ್ರಮಾಣಪತ್ರ ನೀಡಿ ಗೌರವಿಸಲಾಗುವುದು ಎಂದು ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net