ಹಾವೇರಿ: ಜಿಲ್ಲೆಯ ನಾಲ್ಕು ತಾಲೂಕುಗಳ ಐದು ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳ ಸ್ಥಾಪನೆಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಬ್ಯಾಡಗಿ ತಾಲೂಕಿನ ಹಿರೇಅಣಜಿ, ರಾಣೆಬೆನ್ನೂರ ತಾಲೂಕಿನ ಕಾಕೋಳ ಹಾಗೂ ಮುದೇನೂರು, ಹಾವೇರಿ ತಾಲೂಕಿನ ಮೇವುಂಡಿ ಮತ್ತು ಹಿರೇಕೆರೂರ ತಾಲೂಕಿನ ಸುತ್ತಕೋಟಿ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ https//www.karnatakaone.gov.in/public/GramOne
FranchiseeTermskn ನಲ್ಲಿ ಅ.15ರೊಳಗಾಗಿ ಅರ್ಜಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.