ಅಮರ ಶಿಲ್ಪಿ ಜಕಣಾಚಾರಿ ಜಯಂತಿ 1ರಂದು

Published on

ಹಾವೇರಿ: ಜಿಲ್ಲಾಡಳಿತದಿಂದ ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಜಯಂತಿ ಕಾರ್ಯಕ್ರಮವನ್ನು ಜ.1ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮಕ್ಕೆ ಬೇಕಾದ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ ಎಲ್. ಸೂಚನೆ ನೀಡಿದರು.

ಇಲ್ಲಿನ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಜಯಂತಿ ಆಚರಣೆ ಪೂರ್ವ ಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಆಮಂತ್ರಣ ಪತ್ರಿಕೆ, ವೇದಿಕೆ, ಆಸನ, ಕುಡಿಯುವ ನೀರು, ಉಪಹಾರ, ಉಪನ್ಯಾಸಕರ ಆಯ್ಕೆ, ಶಿಲ್ಪಿಗೆ ಸನ್ಮಾನ ಕುರಿತು ಸಮಾಜದ ಮುಖಂಡರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಆರ್.ವಿ.ಚಿನ್ನಿಕಟ್ಟಿ ಕಾರ್ಯಕ್ರಮದ ರೂಪರೇಷೆಗಳ ಕುರಿತು ಮಾಹಿತಿ ನೀಡಿದರು. ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಸಭೆಯಲ್ಲಿ ಉಪಸ್ಥಿತರಿದ್ದರು.

ವಿಶ್ವ ಮಾನವ ದಿನ 30ರಂದು

ವಿಶ್ವ ಮಾನವ ದಿನವನ್ನು ಅರ್ಥಪೂರ್ಣವಾಗಿ ಡಿ.30ರಂದು ಬೆಳಗ್ಗೆ 11 ಗಂಟೆಗೆ ಹಾವೇರಿ ನಗರದ ಗಾಂಧಿ ಭವನದಲ್ಲಿ ಆಚರಿಸಲು ಸಭೆಯಲ್ಲಿ ನಿರ್ಣಯಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net