ಅಮರ ಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಜ.1ರಂದು

Published on

ಹಾವೇರಿ: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜನವರಿ 1ರಂದು ಅಮರ ಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮ ಅರ್ಥಪೂರ್ಣವಾಗಿ ಆಯೋಜಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಅಮರ ಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಕಣಾಚಾರಿ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಇದಕ್ಕೆ ಅಗತ್ಯವಾದ ವಿಚಾರ ಸಂಕಿರಣ, ಸಾಂಸ್ಕೃತಿಕ ಕಾರ್ಯಕ್ರಮ, ಇತರ ಸಿದ್ಧತೆಗಳನ್ನು ಕೈಗೊಳ್ಳುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಎಸ್.ರಾಘವೇಂದ್ರಸ್ವಾಮಿ ಹಾಗೂ ಸಮಾಜದ ವಿವಿಧ ಮುಖಂಡರು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net