ಬಿಜೆಪಿ- ಜೆಡಿಎಸ್ ಮೈತ್ರಿ ಧರ್ಮ ಪಾಲಿಸುತ್ತೇವೆ; ಜೆಡಿಎಸ್ ಜಿಲ್ಲಾಧ್ಯಕ್ಷ ಮಂಜುನಾಥ ಗೌಡಶಿವಣ್ಣನವರ

17 Manjunath Gowdashivannavar
Published on

ಹಾವೇರಿ: ಬಿಜೆಪಿ ಪಕ್ಷದವರು ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಆದರೂ ನಾವು ಪಕ್ಷದ ಸೂಚನೆಯಂತೆ ಮೈತ್ರಿ ಧರ್ಮ ಪಾಲಿಸುತ್ತೇವೆ. ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಪರವಾಗಿ ಪ್ರಚಾರ ಮಾಡುತ್ತೇವೆ. ಬೊಮ್ಮಾಯಿ ಅವರು ಒಂದು ಲಕ್ಷ ಮತಗಳ ಅಂತರದಿಂದ ಗೆಲ್ಲಲಿದ್ದಾರೆ ಎಂದು ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷ ಮಂಜುನಾಥ ಗೌಡಶಿವಣ್ಣವರ ಹೇಳಿದರು.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅವರು ಎಷ್ಟೇ ಕಡೆಗಣಿಸಿದರೂ ಪಕ್ಷದ ಸೂಚನೆ ಪ್ರಕಾರ ಕೆಲಸ ಮಾಡುತ್ತೇವೆ. ಏ.19ರಂದು ಮೈತ್ರಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮಕ್ಕೆ ಜೆಡಿಎಸ್ ಪಕ್ಷದ ಎಲ್ಲ ಜಿಲ್ಲಾ, ತಾಲೂಕು ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು. ಬಿಜೆಪಿ ಪರವಾಗಿ ಪ್ರಚಾರ ಮಾಡಬೇಕು ಎಂದು ಕರೆಕೊಟ್ಟರು.
ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಜಿಲ್ಲಾ ಉಪಾಧ್ಯಕ್ಷರಾದ ಸತೀಶ ಮಾಳದಕರ, ಮೂಕಪ್ಪ ಪಡಿಯಪ್ಪನವರ, ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಖತಲಸಾಬ್ ಬಣಗಾರ, ಸಿದ್ದಪ್ಪ ಗುಡಿಮುಂದರ, ರಾಮನಗೌಡ ಪಾಟೀಲ, ಮಲ್ಲಿಕಾರ್ಜುನ ಅರಳಿ, ಚಂದ್ರಗೌಡ ಭರಮಗೌಡ್ರ, ಅಲ್ತಾಫ ನದಾಪ್, ರಮೇಶ ಮಾಕನೂರ, ಮಹಿಳಾ ಘಟಕದ ಅಧ್ಯಕ್ಷೆ ರೀಟಾ, ಫಿರೋಜ್ ಖಾನ್, ಸಲೀಂ ಸಮನಳ್ಳಿ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net