ಜಿಲ್ಲಾ ಮಟ್ಟದ ಯುವಜನೋತ್ಸವ 29ರಂದು

Published on

ಹಾವೇರಿ: ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ ನ.29ರಂದು ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಜಿಲ್ಲೆಯ 15ರಿಂದ 29 ವರ್ಷದೊಳಗಿನ ಯುವಕ, ಯುವತಿಯರು, ಸಂಘ-ಸಂಸ್ಥೆಗಳ ಸದಸ್ಯರು, ಶಾಲಾ, ಕಾಲೇಜು ವಿದ್ಯಾರ್ಥಿಗಳು ಯುವಜನೋತ್ಸವದಲ್ಲಿ ಭಾಗವಹಿಸಬಹುದು. ಆಸಕ್ತರು https;//docs.google.com/forms/d/1CR8f9TGIpm2p-Dyh_2DxfWFRAWV E9b-3YWAz2_Cns/edit ಐಡಿನಲ್ಲಿ ನೋಂದಾಯಿಸಿಕೊಳ್ಳಬೇಕು. ರಂಗ ಸ್ಥಳದ ಮೇಲೆ ಜೀವಂತ ಪ್ರಾಣಿ, ಬೆಂಕಿ ಹಾಗೂ ಅಪಾಯಕಾರಿ ವಸ್ತುಗಳನ್ನೊಳಗೊಂಡ ಪ್ರದರ್ಶನಕ್ಕೆ ಅವಕಾಶವಿಲ್ಲ. ಗುಂಪು ಹಾಗೂ ವೈಯಕ್ತಿಕ ಸ್ಪರ್ಧೆಗಳಿಗೆ ಪ್ರಥಮ ಹಾಗೂ ದ್ವಿತೀಯ ಬಹುಮಾನ ನೀಡಲಾಗುವುದು. ಪಕ್ಕವಾದ್ಯ, ರಂಗಸಜ್ಜಿಕೆ, ವೇಷಭೂಷಣ, ಇತ್ಯಾದಿ ಪೂರಕ ಉಪಕರಣಗಳನ್ನು ಸ್ಪರ್ಧಿಗಳೇ ಸಿದ್ದಪಡಿಸಿಕೊಳ್ಳಬೇಕು. ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿರುತ್ತದೆ.
ಆಸಕ್ತರು ನ.29ರಂದು ಬೆಳಗ್ಗೆ 9.30ಕ್ಕೆ ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ವರದಿ ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಹಾವೇರಿ ಇವರನ್ನು ಸಂಪರ್ಕಿಸಲು ಕೋರಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net