ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

Published on

ಹಾವೇರಿ: ವಿಶೇಷ ಘಟಕ ಯೋಜನೆಯಡಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಪದವಿ/ಸ್ನಾತಕೋತ್ತರ ಪದವಿ ಪಡೆದಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ ಕನ್ನಡ ಭಾಷೆ ಬಳಸಲು ಪ್ರಬುದ್ದತೆ ಹೊಂದಿರುವ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಅಪ್ರೆಂಟಿಸ್ ತರಬೇತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಇಬ್ಬರು ಪರಿಶಿಷ್ಟ ಜಾತಿಯ ಅಭ್ಯರ್ಥಿಗಳನ್ನು ಮೆರಿಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು, ತರಬೇತಿ ಅವಧಿಯಲ್ಲಿ 15,000 ರೂ. ಸ್ಟೈಪಂಡ್ ನೀಡಲಾಗುವುದು.

ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನ.19ರೊಳಗಾಗಿ ಅರ್ಜಿ ಸಲ್ಲಿಸಬೇಕು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಹಾವೇರಿ ಇಲ್ಲಿಗೆ ಸಂಪರ್ಕಿಸಬಹುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net