ಹಿರಿಯ ಪತ್ರಕರ್ತ ಪ್ರಕಾಶ ಜೋಶಿ ನಿಧನ

29 Prakash Joshi
Published on

ಹಾವೇರಿ: ಇಲ್ಲಿನ ಹಿರಿಯ ಪತ್ರಕರ್ತ ಪ್ರಕಾಶ ಜೋಶಿ (75) ಬುಧವಾರ ಬೆಳಗ್ಗೆ ಅನಾರೋಗ್ಯದಿಂದ ನಿಧನ ಹೊಂದಿದರು. ಮೃತರಿಗೆ ಪತ್ನಿ, ಪುತ್ರ ಇದ್ದಾರೆ.

ಧಾರವಾಡ ಜಿಲ್ಲೆ ಗುಡಗೇರಿ ಮೂಲದ ಪ್ರಕಾಶ ಜೋಶಿ ಸಂಯುಕ್ತ ಕರ್ನಾಟಕ ದಿನಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪಿ.ಟಿ.ಐ ಅರೆಕಾಲಿಕ ವರದಿಗಾರರಾಗಿ 9 ವರ್ಷ ಸೇವೆ ಸಲ್ಲಿಸಿದ್ದರು. ಹಾವೇರಿ ಜಿಲ್ಲೆಯ ಗ್ರಾಮೀಣ ಭಾಗದ ಮೂಲ ಸೌಲಭ್ಯಗಳ ಕುರಿತು ಹೆಚ್ಚಿನ ಗಮನ ಸೆಳೆದಿದ್ದರು.

ತಬಲಾ ಕಲೆಯಲ್ಲಿ ಪ್ರಾವಿಣ್ಯತೆ ಹೊಂದಿದ್ದ ಜೋಶಿ ಕೆಲ ಪುಸ್ತಕಗಳನ್ನೂ ಬರೆದಿದ್ದರು. ಕಹಳೆ ಹಾಗೂ ದೇವದತ್ತ ಕವನಗಳು, ಪ್ರಸನ್ನದತ್ತ ಇವರ ಸಂಗ್ರಹಿತ ಕೃತಿಗಳು. ಹಲವು ಸಂಘ-ಸಂಸ್ಥೆಗಳ ಪದಾಧಿಕಾರಿಯಾಗಿದ್ದರು. 2019ರಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿಯ ವಾರ್ಷಿಕ ಪ್ರಶಸ್ತಿ ಇವರಿಗೆ ಲಭಿಸಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net