ಪತ್ರಕರ್ತ ಆರ್.ಜಯಕುಮಾರ್‌ಗೆ ಶ್ರದ್ದಾಂಜಲಿ

oppo_0
oppo_0
Published on

ಹಾವೇರಿ: ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಪತ್ರಕರ್ತ, ಸಾಮಾಜಿಕ ಕಾರ್ಯಕರ್ತ, ಎಸ್‌ಎಫ್‌ಐ ಮಾಜಿ ರಾಜ್ಯಾಧ್ಯಕ್ಷ ಆರ್.ಜಯಕುಮಾರ ಅವರಿಗೆ ಭಾರತ ವಿದ್ಯಾರ್ಥಿ ಫೆಡರೇಷನ್ ಹಾಗೂ ಡಿವೈಎಫ್‌ಐ ಜಿಲ್ಲಾ ಸಮಿತಿಗಳ ವತಿಯಿಂದ ನಗರದ ಸರ್ಕಾರಿ ನೌಕರರ ಭವನದಲ್ಲಿ ಭಾನುವಾರ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಗೌರವ ಸಲ್ಲಿಸುವ ಮೂಲಕ ಶ್ರದ್ದಾಂಜಲಿ ಸಲ್ಲಿಸಲಾಯಿತು.
ಸಾಹಿತಿ ಸತೀಶ ಕುಲಕರ್ಣಿ ಮಾತನಾಡಿ, ಹಿರಿಯ ಪತ್ರಕರ್ತ ಆರ್.ಜಯಕುಮಾರ ಮೂಲತಃ ಕೊಡಗಿನವರು. ವಿದ್ಯಾರ್ಥಿ ಚಳವಳಿ ಮೂಲಕವೇ ಪತ್ರಕರ್ತರಾಗಿ ರೂಪುಗೊಂಡವರು. ಸಂಯುಕ್ತ ಕರ್ನಾಟಕ, ವಿಜಯ ಕರ್ನಾಟಕ, ಉದಯ ಟಿವಿ, ಇನ್ನಿತರ ಸಂಸ್ಥೆಗಳಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲ ಕೆಲಸ ಮಾಡಿದ್ದಾರೆ. ಜನಪರ ಹೋರಾಟದಲ್ಲಿ ಭಾಗವಹಿಸುತ್ತಿದ್ದ ಅವರು ಇತ್ತೀಚೆಗೆ ಗಾಂಧಿ ಮರೆತ ನಾಡಿನಲ್ಲಿ ಮತ್ತು ಕಾಡು ಹಾದಿಯ ಬೆಳಕಿನ ಜಾಡಿನಲ್ಲಿ ಎಂಬ ಎರಡು ಪುಸ್ತಕಗಳನ್ನು ಹೊರತಂದಿದ್ದರು. ಅವರ ಅಗಲಿಕೆಯಿಂದ ನಾಡಿಗೆ ಅಪಾರ ನಷ್ಟ ಉಂಟಾಗಿದೆ ಎಂದು ನೆನೆದರು.
ಎಐಟಿಯುಸಿ ಜಿಲ್ಲಾಧ್ಯಕ್ಷ ಹೊನ್ನಪ ಮರೆಯಮ್ಮನವರ, ಡಿವೈಎಫ್‌ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ, ಬಸವರಾಜ ಹಾದಿಮನಿ, ಕೆಎಸ್‌ಎಂಎಫ್ ರಾಜ್ಯ ಕಾರ್ಯದರ್ಶಿ ಅಕ್ಷತಾ ಕೆ., ಮಹಮ್ಮದ್ ನರೇಗಲ್ಲ, ಉಡಚಪ್ಪ ಮಾಳಗಿ, ಸುರೇಶ ಚಲವಾದಿ, ಎ.ಕೆ.ಹೆಬಸೂರ, ರೇಣುಕಾ ಕಹಾರ, ಬಸವರಾಜ ಕೆಂಗಪ್ಪಳವರ, ಶೆಟ್ಟಿ ವಿಭೂತಿ, ಮಾರುತಿ ತಳವಾರ, ಸುಭಾಷ ಸೊಟ್ಟಪ್ಪನವರ, ಇತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net