

ಹಾವೇರಿ: ನಿರಂತರ ಅಧ್ಯಯನ ಮತ್ತು ಕಠಿಣ ಪರಿಶ್ರಮದಿಂದ ಯಶಸ್ಸು ಸಾಧ್ಯ. ವಕೀಲರು ತಮ್ಮ ವೃತ್ತಿಯಲ್ಲಿ ಸದಾ ಅಧ್ಯಯನ ಶೀಲರಾಗಬೇಕು. ಸಂವಿಧಾನದ ಆಶಯಗಳಿಗೆ ಪೂರಕವಾಗಿ ಕರ್ತವ್ಯ ನಿಭಾಯಿಸಬೇಕು ಎಂದು ಜಿಲ್ಲಾ ಪ್ರಧಾನ ವ ಸತ್ರ ನ್ಯಾಯಾಧೀಶ ಕೆ.ಸಿ.ಸದಾನಂದಸ್ವಾಮಿ ವಕೀಲರಿಗೆ ಸಲಹೆ ನೀಡಿದರು.
ನ್ಯಾಯಾಧೀಶ ಕೆ.ಸಿ. ಸದಾನಂದಸ್ವಾಮಿ ಅವರ ನಿವೃತ್ತರಾದ ಹಿನ್ನೆಲೆಯಲ್ಲಿ ಜಿಲ್ಲಾ ವಕೀಲರ ಸಂಘದ ಸಭಾಂಗಣದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು. ಸಮಯಕ್ಕೆ ಹೆಚ್ಚು ಬೆಲೆ ನೀಡಬೇಕು. ಅಂದಾಗ ಮಾತ್ರ ಯಶಸ್ವಿಯಾಗಲು ಸಾಧ್ಯ. ಸಮಾಜಮುಖಿ ಚಿಂತನಾ ಶೀಲರಾಗಬೇಕು. ನನಗೆ ಸೇವಾ ಅವಧಿಯಲ್ಲಿ ಸಹಕಾರ ನೀಡಿದ ಎಲ್ಲ ವಕೀಲರ ಸಹಕಾರವನ್ನು ಸ್ಮರಿಸಿದರು.
ವಕೀಲರ ಸಂಘದಿಂದ ನ್ಯಾಯಾಧೀಶರನ್ನು ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷ ಎಸ್.ಎಚ್.ಜತ್ತಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು, ಆಡಳಿತ ಮಂಡಳಿಯ ಸದಸ್ಯರು, ವಕೀಲರು ಪಾಲ್ಗೊಂಡಿದ್ದರು.
ಸಂಘದ ಕಾರ್ಯದರ್ಶಿ ಪಿ.ಎಸ್.ಹೆಬ್ಬಾಳ ಸನ್ಮಾನಿತರ ಪರಿಚಯ ಮಾಡಿದರು. ಸಹ ಕಾರ್ಯದರ್ಶಿ ಎನ್.ಎಸ್.ಕಾಳೆ ಸ್ವಾಗತಿಸಿದರು. ಆರ್.ಎಚ್.ತಂಗೊಂಡರ ವಂದಿಸಿದರು. ಸಂಘದ ಉಪಾಧ್ಯಕ್ಷ ಸಿ.ಪಿ.ಜಾವಗಲ್ ನಿರೂಪಿಸಿದರು.