ರಾಷ್ಟ್ರೀಯ ಲೋಕ ಅದಾಲತ್ ಸೆ.14ರಂದು

14 HVR 4 A
Published on

ಹಾವೇರಿ: ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಸೆಪ್ಟೆಂಬರ್ 14ರಂದು ರಾಷ್ಟ್ರೀಯ ಲೋಕ ಅದಾಲತ್ ಜರುಗಲಿದೆ. ಸಾರ್ವಜನಿಕರು ತಮ್ಮ ವ್ಯಾಜ್ಯಪೂರ್ವ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳು ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಬಹುದು.
ಒಂದು ವರ್ಷದಲ್ಲಿ ನಾಲ್ಕು ರಾಷ್ಟ್ರೀಯ ಲೋಕ ಅದಾಲತ್ ನಡೆಸಲಾಗುತ್ತಿದೆ. ಕಳೆದ ಜುಲೈನಲ್ಲಿ ನಡೆದ ಲೋಕ ಅದಾಲತ್‌ನಲ್ಲಿ 81,115 ಪ್ರಕರಣಗಳು ಇತ್ಯರ್ಥಗೊಂಡಿದ್ದು, 43,73,15,690 ರೂ. ಮೊತ್ತದ ರಾಜೀಯಾಗಿದೆ.
ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇಚ್ಛಿಸಿದಲ್ಲಿ ಮುಂಚಿತವಾಗಿ ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಕೆ.ಸಿ.ಸದಾನಂದಸ್ವಾಮಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net