ನ್ಯಾಯಾಂಗದ ಪಾವಿತ್ರೃತೆ ಕಾಪಾಡಿ; ಕಿರಿಯ ವಕೀಲರಿಗೆ ನ್ಯಾಯಾಧೀಶೆ ಯಾದವ ವನಮಾಲಾ ಆನಂದರಾವ್ ಕಿವಿಮಾತು

3 HVR 8
Published on

ಹಾವೇರಿ: ಜನರು ನ್ಯಾಯಾಂಗದ ಮೇಲೆ ಅಪಾರ ನಂಬಿಕೆ ಹಾಗೂ ವಿಶ್ವಾಸ ಇಟ್ಟುಕೊಂಡಿದ್ದಾರೆ. ಅದಕ್ಕೆ ದಕ್ಕೆಯಾಗದಂತೆ ನಾವೆಲ್ಲರೂ ನ್ಯಾಯಾಂಗದ ಪಾವಿತ್ರೃತೆಯನ್ನು ಕಾಪಾಡಬೇಕು ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಯಾದವ ವನಮಾಲಾ ಆನಂದರಾವ್ ಕಿವಿಮಾತು ಹೇಳಿದರು.
ನಗರದ ಜಿಲ್ಲಾ ವಕೀಲರ ಭವನದಲ್ಲಿ ಇತ್ತೀಚೆಗೆ ಜಿಲ್ಲಾ ವಕೀಲರ ಸಂಘದಿಂದ ಆಯೋಜಿಸಿದ್ದ ಸೇವಾ ನಿವೃತ್ತಿ ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ನಿರಂತರ ಅಧ್ಯಯನ ಮತ್ತು ಸತತ ಪ್ರಯತ್ನದಿಂದ ಸಾಧನೆಯ ಶಿಖರ ಏರಬೇಕು. ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಸ್.ಎಚ್.ಜತ್ತಿ ಮಾತನಾಡಿದರು.
ಜಿಲ್ಲಾ ನ್ಯಾಯಾಧೀಶರಾದ ಜಿ.ಎಲ್.ಲಕ್ಷ್ಮೀ ನಾರಾಯಣ, ಎಂ.ಜಿ.ಶಿವಳ್ಳಿ, ನಿಂಗನಗೌಡ ಪಾಟೀಲ, ಪ್ರಕಾಶ ವಿ., ಪುಟ್ಟರಾಜ, ಬಿ.ಆರ್.ಮುತಾಲಿಕ ದೇಸಾಯಿ, ಸಂಘದ ಕಾರ್ಯದರ್ಶಿ ಪಿ.ಎಸ್.ಹೆಬ್ಬಾಳ, ಉಪಾಧ್ಯಕ್ಷ ಸಿ.ಪಿ.ಜಾವಗಲ್, ಎನ್.ಎಸ್.ಕಾಳೆ, ಉಮರ್ ರಜಾಕನವರ, ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net