ಹಾವೇರಿ: ರಾಮನಕೊಪ್ಪ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಇರುವುದರಿಂದ ಈ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಗೆ ಬರುವ ಮುತ್ತಳ್ಳಿ, ಕಮಲಾನಗರ, ತಡಸ, ಗಾಯತ್ರಿ ತಪೋಭೂಮಿ, ಸುತ್ತಮುತ್ತಲಿನ ಭಾಗದಲ್ಲಿ ಜೂ.14ರಂದು ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ತಿಳಿಸಿದೆ.