ಜೂನಿಯರ್ ಇಂಜಿನಿಯರ್, ಸಬ್ ಇನ್ಸಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Published on

ಹಾವೇರಿ: ಭಾರತದ ಸರ್ಕಾರದ ಸ್ಟಾಫ್ ಸೆಲೆಕ್ಷನ್ ಕಮಿಷನ್‌ನಿಂದ ಖಾಲಿ ಇರುವ ಸುಮಾರು 1,324 ಜೂನಿಯರ್ ಇಂಜಿನಿಯರ್ (ಸಿವಿಲ್, ಮೆಕ್ಯಾನಿಕಲ್ ಮತ್ತು ಕ್ವಾಂಟಿಟಿ ಸರ್ವೇಯಿಂಗ್ ಮತ್ತು ಒಪ್ಪಂದಗಳು) ಹಾಗೂ 1,876 ದೆಹಲಿ ಪೊಲೀಸ್ ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಗಳಲ್ಲಿ ಸಬ್ ಇನ್ಸಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಜೂನಿಯರ್ ಇಂಜಿನಿಯರ್ ಹುದ್ದೆಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ಮತ್ತು ಅನುಭವ ಹೊಂದಿರಬೇಕು. ದೆಹಲಿ ಪೋಲೀಸ್ ಮತ್ತು ಕೇಂದ್ರ ಸಶಸ್ತ್ರ ಪೋಲೀಸ್ ಪಡೆಗಳಲ್ಲಿ ಸಬ್-ಇನ್ಸಪೆಕ್ಟರ್ ಹುದ್ದೆಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಅರ್ಜಿ ಶುಲ್ಕ 100 ರೂ. ಇದ್ದು, ಅರ್ಹ ಅಭ್ಯರ್ಥಿಗಳು ಆಗಸ್ಟ್ 16ರ ಒಳಗೆ ಠಿಠಿ://ಠ್ಚ.್ಞಜ್ಚಿ.ಜ್ಞಿ ಜಾಲತಾಣದ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಠಿಠಿ://ಠ್ಚ.್ಞಜ್ಚಿ.ಜ್ಞಿ ಅಥವಾ ಡಿಡಿಡಿ.ಠ್ಚಝ್ಟ.ಚ್ಟ.್ಞಜ್ಚಿ.ಜ್ಞಿ ಜಾಲತಾಣಕ್ಕೆ ಭೇಟಿ ನೀಡಬಹುದು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net