ಕಬ್ಬೂರಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ 29ರಂದು

Published on

ಹಾವೇರಿ: ಲಯನ್ಸ್ ಕ್ಲಬ್ ಹಾಗೂ ಜಿಲ್ಲಾ ಅಂದತ್ವ ನಿವಾರಣ ಸಂಸ್ಥೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಸ್ಪತ್ರೆ, ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆ ಹಾಗೂ ಇತರ ಸಂಸ್ಥೆಗಳ ಸಹಯೋಗದಲ್ಲಿ ಮಾ.29ರಂದು ತಾಲೂಕಿನ ಕಬ್ಬೂರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ ಆಯೋಜಿಸಲಾಗಿದೆ.

ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1ರವರೆಗೆ ಶಿಬಿರ ನಡೆಯಲಿದೆ. ಆಸಕ್ತರು 2 ಪಾಸ್‌ಪೋರ್ಟ್ ಸೈಜ್ ಭಾವಚಿತ್ರ, ಆಧಾರ್‌ಕಾರ್ಡ್, ರೇಶನ್ ಕಾರ್ಡ್ ಅಥವಾ ವೋಟರ್ ಕಾರ್ಡ್ ಝರಾಕ್ಸ್ ಪ್ರತಿಗಳೊಂದಿಗೆ ಆಗಮಿಸಬೇಕು. ಶಸ್ತ್ರಚಿಕಿತ್ಸೆಗೆ ಆಯ್ಕೆಯಾದವರಿಗೆ, ಕರೆದುಕೊಂಡು ಹೋಗಲು ಅಂದೇ ದಿನಾಂಕ ತಿಳಿಸಲಾಗುವುದು ಎಂದು ಲಯನ್ಸ್ ಕ್ಲಬ್ ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net