ಕನಕ ಗುರುಪೀಠದಲ್ಲಿ ಗುರುಪೂರ್ಣಿಮ ಜು.21ರಂದು

Kanakadasaru
Published on

ಹಾವೇರಿ: ಬ್ಯಾಡಗಿ ತಾಲೂಕು ಕಾಗಿನೆಲೆಯ ಶ್ರೀ ಕನಕದಾಸರ ಗುರುಪೀಠದಲ್ಲಿ ಜು.21ರಂದು ಗುರು ಪೂರ್ಣಿಮ ಮಹೋತ್ಸವ ಸಮಾರಂಭ ಹಾಗೂ ಶ್ರೀ ಬೀರೇಂದ್ರ ಕೇಶವ ತಾರಕಾನಂದಪುರಿ ಸ್ವಾಮೀಜಿಯವರ 18ನೇ ವರ್ಷದ ಪುಣ್ಯಾರಾಧನೆ ಕಾರ್ಯಕ್ರಮ ಜರುಗಲಿದೆ.
ಶ್ರೀಮಠದ ಜಗದ್ಗುರು ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಜಡೆದೇವರ ಮಠದ ಶ್ರೀ ಅಮೋಘ ಸಿದ್ದೇಶ್ವರಾನಂದ ಸ್ವಾಮೀಜಿ, ಶ್ರೀ ಈಶ್ವರಾನಂದಪುರಿ ಸ್ವಾಮೀಜಿ, ಶ್ರೀ ಶಿವಾನಂದಪುರಿ ಸ್ವಾಮೀಜಿ, ಶ್ರೀ ಸಿದ್ದರಾಮಾನಂದಪುರಿ ಸ್ವಾಮೀಜಿ, ಶ್ರೀ ರೇವಣಸಿದ್ದೇಶ್ವರ ಶಾಂತಮಯ ಸ್ವಾಮೀಜಿ, ಶ್ರೀ ಚಿನ್ಮಯಾನಂದ ಸ್ವಾಮೀಜಿ, ಮತ್ತಿತರರು ಭಾಗವಹಿಸುವರು. ಕುರುಬ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಕರ್ನಾಟಕ ಪ್ರದೇಶ ಕುರುಬ ಸಂಘದ ಜಿಲ್ಲಾಧ್ಯಕ್ಷ ಮಾರುತಿ ಹರಿಹರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹನುಮಂತಗೌಡ ಗಾಜೀಗೌಡ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net