ಕಾಗಿನೆಲೆಯಲ್ಲಿ ಕನಕದಾಸ ಜಯಂತಿ 30ರಂದು

16 HVR 7
Published on

ಹಾವೇರಿ: ಜಿಲ್ಲಾಡಳಿತದ ವತಿಯಿಂದ ಕನಕದಾಸ ಜಯಂತಿ ಕಾರ್ಯಕ್ರಮವನ್ನು ನ.30ರಂದು ಕಾಗಿನೆಲೆಯಲ್ಲಿ ಆಚರಿಸಲು ನಿರ್ಧರಿಸಲಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ವ್ಯವಸ್ಥಿತವಾಗಿ ಕಾರ್ಯಕ್ರಮ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಸೂಚನೆ ನೀಡಿದರು.
ಇಲ್ಲಿನ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕನಕದಾಸ ಜಯಂತಿ ಆಚರಣೆ ಪೂರ್ವ ಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಶಿಷ್ಟಾಚಾರದಂತೆ ಆಮಂತ್ರಣ ಪತ್ರಿಕೆ, ವಿಶೇಷ ಉಪನ್ಯಾಸ, ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಯಿತು.
ಸಮಾಜದವರೊಂದಿಗೆ ಚರ್ಚಿಸಿ ಕಾರ್ಯಕ್ರಮದ ಸ್ಥಳ, ಸಮಯವನ್ನು ಅಂತಿಮಗೊಳಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಿಗೆ ಸೂಚಿಸಲಾಯಿತು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಆರ್.ವಿ.ಚಿನ್ನಿಕಟ್ಟಿ, ವಿವಿಧ ಇಲಾಖೆ ಅಧಿಕಾರಿಗಳು, ಎಸ್.ಎಫ್.ಎನ್.ಗಾಜಿಗೌಡ್ರ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net