ಕಾಗಿನೆಲೆಯಲ್ಲಿ ಕನಕದಾಸರ ಜಯಂತ್ಯುತ್ಸವ 30ರಂದು

Kanakadasaru
Published on

ಹಾವೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕಾಗಿನೆಲೆ ಮಹಾಸಂಸ್ಥಾನ ಗುರುಪೀಠದ ಸಹಯೋಗದಲ್ಲಿ ಭಕ್ತ ಶ್ರೇಷ್ಠ ಶ್ರೀ ಕನಕದಾಸರ ಜಯಂತ್ಯುತ್ಸವ ನ.30ರಂದು ಬೆಳಗ್ಗೆ 11 ಗಂಟೆಗೆ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದಲ್ಲಿ ಜರುಗಲಿದೆ.
ಸುಕ್ಷೇತ್ರ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಸಮಾರಂಭ ಉದ್ಘಾಟಿಸಲಿದ್ದಾರೆ. ವಿಧಾನಸಭಾ ಉಪಾಧ್ಯಕ್ಷ ರುದ್ರಪ್ಪ ಲಮಾಣಿ, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಸ್ಥಳೀಯ ಶಾಸಕರು, ಸಂಸದರು, ಮತ್ತಿತರರು ಭಾಗವಹಿಸಲಿದ್ದಾರೆ. ಬೆಂಗಳೂರಿನ ಸಾಹಿತಿ ಡಾ.ಮಂಜುನಾಥ ಮಾಗೋದಿ ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net