ಕನಕದಾಸರ ಜಯಂತಿ ಪೂರ್ವಭಾವಿ ಸಭೆ ಅ.10ರಂದು

Published on

ಹಾವೇರಿ: ಬ್ಯಾಡಗಿ ತಾಲೂಕು ಕಾಗಿನೆಲೆ ಕನಕ ಗುರುಪೀಠದಲ್ಲಿ ಅ.10ರಂದು ಬೆಳಗ್ಗೆ 10 ಗಂಟೆಗೆ ದಾಸಶ್ರೇಷ್ಠ ಭಕ್ತ ಕನಕದಾಸರ ಜಯಂತಿ ಅಂಗವಾಗಿ ಜಗದ್ಗುರು ನಿರಂಜನಾನಂದಪುರಿ ಸ್ವಾಮೀಜಿಯವರ ನೇತೃತ್ವದಲ್ಲಿ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ.

ಸಭೆಯಲ್ಲಿ ನವೆಂಬರ್ 8ರಂದು ಕನಕದಾಸರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸುವ ಕುರಿತು ಚರ್ಚಿಸಲಾಗುವುದು. ಕರ್ನಾಟಕ ಪ್ರದೇಶ ಕುರುಬರ ಸಂಘದ ಜಿಲ್ಲಾ ಮತ್ತು ತಾಲೂಕು ಘಟಕಗಳ ನೂತನ ಪದಾಧಿಕಾರಿಗಳ ಆಯ್ಕೆ ಕುರಿತು ಚರ್ಚೆ ನಡೆಸಿ, ತೀರ್ಮಾನ ತೆಗೆದುಕೊಳ್ಳಲಾಗುವುದು.

ಸಭೆಗೆ ಜಿಲ್ಲೆಯ ಕುರುಬ ಸಮಾಜದ ಚುನಾಯಿತ ಪ್ರತಿನಿಧಿಗಳು ಜಿಲ್ಲಾ ಮತ್ತು ತಾಲೂಕು ಕುರುಬ ಸಂಘದ ಪದಾಧಿಕಾರಿಗಳು, ಶ್ರೀಮಠದ ಧರ್ಮದರ್ಶಿಗಳು, ಕುರುಬ ಸಮಾಜದ ವಿವಿಧ ಸಂಘಟನೆಯ ಮುಖಂಡರು, ಸಮಾಜದ ಗಣ್ಯರು, ಕನಕಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಾಗವಹಿಸಿ ಸಲಹೆ, ಸೂಚನೆ ನೀಡುವಂತೆ ಜಿಲ್ಲಾ ಕುರುಬ ಸಂಘದ ಪ್ರಧಾನ ಕಾರ್ಯದರ್ಶಿ ಹನುಂತಗೌಡ ಗಾಜೀಗೌಡ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net