ಪ್ರತಿಭಾವಂತ ಮಕ್ಕಳಿಗೆ ಪ್ರೋತ್ಸಾಹ, ಉತ್ಸಾಹ ತುಂಬಿ; ಕಾಗಿನೆಲೆಯ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಕಿವಿಮಾತು

22 HVR 4
Published on

ಹಾವೇರಿ: ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಭಾವಂತ ಮಕ್ಕಳಿಗೆ ಪ್ರೋತ್ಸಾಹ-ಉತ್ಸಾಹ ತುಂಬುವ ಕೆಲಸವಾಗಬೇಕಾಗಿದೆ. ಪ್ರತಿಯೊಬ್ಬ ಮಕ್ಕಳ ಕಲಿಕೆಯನ್ನು ಸ್ಪರ್ಧೆಯಾಗಿ ಸ್ವೀಕರಿಸಬೇಕಾಗಿದೆ ಎಂದು ಕಾಗಿನೆಲೆ ಶ್ರೀ ಕನಕಗುರು ಪೀಠದ ಜಗದ್ಗುರು ಶ್ರೀ ನಿರಂಜನಾ ನಂದಪುರಿ ಸ್ವಾಮೀಜಿ ಕಿವಿಮಾತು ಹೇಳಿದರು.

ಇಲ್ಲಿಯ ಕೆಇಬಿ ಕಲ್ಯಾಣ ಮಂಟಪದಲ್ಲಿ ತಾಲೂಕು ಕನಕ ನೌಕರರ ಸಂಘದಿಂದ ಇತ್ತೀಚೆಗೆ ಆಯೋಜಿಸಿದ್ದ ಭಕ್ತ ಕನಕದಾಸರ 537ನೇ ಜಯಂತ್ಯುತ್ಸವದ ಅಂಗವಾಗಿ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಸಮಾರಂಭದ ಸಾನಿಧ್ಯ ವಹಿಸಿ ಮಾತನಾಡಿದರು. ಕುರುಬ ಸಮುದಾಯವು ಶ್ರಮಿಕ ಜೀವಿಗಳು, ತಮ್ಮ ಶ್ರಮದ ಆದಾಯವನ್ನು ಮಕ್ಕಳ ಉತ್ತಮ ಶಿಕ್ಷಣಕ್ಕಾಗಿ ಬಳಕೆ ಮಾಡಿ ಮೂಢನಂಬಿಕೆ, ಕಂದಾಚಾರಗಳಿಂದ ಹೊರ ಬಂದಾಗ ಮಾತ್ರ ನೀವು ಆರ್ಥಿಕವಾಗಿ ಬಲಿಷ್ಠರಾಗಲು ಸಾಧ್ಯ ಎಂದರು.

ಸಮುದಾಯದ ಪ್ರತಿಯೊಬ್ಬ ನೌಕರರು ಬುದ್ದ, ಕನಕ, ಡಾ.ಬಿ.ಆರ್.ಅಂಬೇಡ್ಕರ್ ನ್ಯಾಯ, ಸಮ್ಮತ ತತ್ವದಡಿ ಸಾರ್ವಜನಿಕರ ಸೇವೆಯನ್ನು ಅಳವಡಿಸಿಕೊಳ್ಳಲು ಶ್ರೀಗಳು ಕರೆ ನೀಡಿದರು.

ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಲ್.ವೈ.ಶಿರಕೋಳ, ಸಂಘದ ಮಹಾ ಪೋಷಕ ವಿಜಯಕುಮಾರ ಮುದಕಣ್ಣನವರ, ಚರ್ಮರೋಗ ತಜ್ಞ ಡಾ.ರಾಘವೇಂದ್ರ ಜಿಗಳಿಕೋಪ್ಪ, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ, ತಹಸೀಲ್ದಾರ್ ಶರಣಮ್ಮ ಮಾತನಾಡಿದರು.

ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್.ಗಾಜಿಗೌಡ್ರ ಸಮಾರಂಭ ಉದ್ಘಾಟಿಸಿದರು. ತಾಲೂಕು ನೌಕರರ ಸಂಘದ ಅಧ್ಯಕ್ಷ ಎಸ್.ಎನ್.ಕಂಬಳಿ ಅಧ್ಯಕ್ಷತೆ ವಹಿಸಿದ್ದರು.

ಸಮಾರಂಭದಲ್ಲಿ ಉಪವಿಭಾಗಾಧಿಕಾರಿ ಚನ್ನಪ್ಪ ಎಚ್.ಬಿ, ಲೋಕೊಪಯೋಗಿ ಇಲಾಖೆಯ ಕಾರ್ಯಪಾಲಕ ಇಂಜನಿಯರ್ ನಿಂಗನಗೌಡರ, ಸ್ಥಾನಿಕ ವೈದ್ಯಾಧಿಕಾರಿ ಪರಸಪ್ಪ ಚುರ್ಚಿಹಾಳ, ಜಿಲ್ಲಾ ಗ್ರಂಥಾಲಯದ ಮುಖ್ಯಸ್ಥ ಅಶೋಕ ನಡಕಟ್ಟಿನ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಜಿ.ಕೋಟಿ, ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದ ಸಹಾಯಕ ನಿರ್ದೇಶಕ ಡಾ.ಶಂಭುಲಿಂಗ ಬಡ್ಡಿ, ಕಾಗಿನೆಲೆ ಅಭಿವೃದ್ದಿ ಪ್ರಾಧಿಕಾರದ ಆಯುಕ್ತ ಡಿ.ರವಿ, ಇತರರು ಇದ್ದರು.

ಶಿವಾನಂದ ಕಾಕೋಳ ಸ್ವಾಗತಿಸಿದರು. ರಾಜು ಬಜ್ಜಿ ನಿರೂಪಿಸಿದರು. ಬಿ.ಎಸ್.ದಲ್ಲಣ್ಣನವರ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net