

ಹಾವೇರಿ: ವಿಶ್ವಕ್ಕೆ ಉತ್ತಮ ಸಂದೇಶ ಸಾರಿದ ಶ್ರೀ ಯೋಗಿನಾರೇಯಣ ಯತೀಂದ್ರ ಅವರ ಆದರ್ಶ ಗುಣಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡು ಸನ್ಮಾರ್ಗದಲ್ಲಿ ಸಾಗಬೇಕು ಎಂದು ನಗರಸಭೆ ಉಪಾಧ್ಯಕ್ಷ ಮಲ್ಲಿಕಾರ್ಜುನ ಸಾತೇನಹಳ್ಳಿ ಹೇಳಿದರು.
ನಗರದ ಗಾಂಧಿ ಭವನದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಾವೇರಿ ಜಿಲ್ಲಾ ಬಲೀಜ ಸಮಾಜದ ಸಹಯೋಗದಲ್ಲಿ ಆಯೋಜಿಸಿದ್ದ ಶ್ರೀ ಯೋಗಿನಾರೇಯಣ ಯತೀಂದ್ರರ ಕೈವಾರ ತಾತಯ್ಯನವರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಯುವ ಪೀಳಿಗೆ ಹಿರಿಯ ತತ್ವಜ್ಞಾನಿಗಳ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸುಂದರ ಬದಕು ಕಟ್ಟಿಕೊಳ್ಳಬೇಕು ಎಂದರು.
ನಿವೃತ್ತ ಶಿಕ್ಷಕ ಎನ್.ಎಚ್ ಮಕರಿ ಕೈವಾರ ತಾತಯ್ಯನವರ ಜೀವನದ ಕುರಿತು ಉಪನ್ಯಾಸ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಆರ್.ವಿ ಚಿನ್ನಿಕಟ್ಟಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರಾಘವೇಂದ್ರ ತಹಸೀಲ್ದಾರ್, ಪ್ರಾಚಾರ್ಯ ಡಾ.ಬಸನಗೌಡ್ರ, ಬಸವರಾಜ, ದೇವರಾಜ ನಾಯ್ಡು, ಧರ್ಮಣ್ಣ, ರಾಜಶೇಖರ ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.