ಕನವಳ್ಳಿ ಹಾಸ್ಟೆಲ್‌ಗೆ ನುಗ್ಗಿದ ಮಳೆನೀರು

17 HVR 9 A
Published on

ಹಾವೇರಿ: ಭಾರಿ ಮಳೆಗೆ ತಾಲೂಕಿನ ಕನವಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದ ಬಿಸಿಎಂ ಹಾಸ್ಟೆಲ್‌ಗೆ ನೀರು ನುಗ್ಗಿದೆ. ಗ್ರಾಮದ ಪ್ರಸಿದ್ಧ ಪರಮೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಕಂಬಗಳು ನೆಲಕ್ಕುರುಳಿವೆ.
ವಾರದಿಂದ ಸತತವಾಗಿ ಸುರಿಯುತ್ತಿರುವ ಮಳೆಗೆ ಗ್ರಾಮಸ್ಥರು ಹೈರಾಣಾಗಿದ್ದಾರೆ. ಬುಧವಾರ ತಡರಾತ್ರಿಯಿಂದ ಗುರುವಾರ ಬೆಳಗ್ಗೆವರೆಗೂ ನಿರಂತರವಾಗಿ ಸುರಿದ ಮಳೆಗೆ ಹಾಸ್ಟೆಲ್‌ಗೆ ನೀರು ನುಗ್ಗಿದ ಪರಿಣಾಮ ಶಿಕ್ಷಕರು, ವಿದ್ಯಾರ್ಥಿಗಳು ಪರದಾಡುವಂತಾಗಿದೆ.
ಗ್ರಾಮದ ನೂರಾರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಮೆಕ್ಕೆಜೋಳ, ಹತ್ತಿ, ಸೋಯಾಬೀನ್, ಶೇಂಗಾ, ಎಲೆಬಳ್ಳಿ ತೋಟ ಸೇರಿದಂತೆ ಕೃಷಿ, ತೋಟಗಾರಿಕೆ ಬೆಳೆಗಳು ಜಲಾವೃತಗೊಂಡಿವೆ. ಕೆಲ ಮನೆಗಳು ಹಾಣಿಗೀಡಾಗಿವೆ. ಈ ಕೂಡಲೇ ಜಿಲ್ಲಾಡಳಿತ ಹಾನಿಗೀಡಾದ ರೈತರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net