ಹೃದಯಾಘಾತದಿಂದ ಇಂಜಿನಿಯರ್ ಸಾವು

8 Hanumanta Yaligara
Published on

ಹಾವೇರಿ: ತಾಲೂಕಿನ ಕಂಚಾರಗಟ್ಟಿ ಗ್ರಾಮದ ಹನುಮಂತ ಬಸವರಾಜಪ್ಪ ಯಲಿಗಾರ (31) ಬೆಂಗಳೂರಿನಲ್ಲಿ ಮಂಗಳವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ಇಂಜಿನಿಯರ್ ಆಗಿರುವ ಹನುಮಂತ ಮಂಗಳವಾರ ಬೆಳಗ್ಗೆ ಎದೆ ನೋವಿನಿಂದ ಬಳಲಿ ಆಸ್ಪತ್ರೆಗೆ ತೆರಳುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ. ಎರಡು ವರ್ಷದ ಹಿಂದಷ್ಟೇ ಮದುವೆಯಾಗಿದ್ದ ಹನುಮಂತ ಅವರ ಪತ್ನಿ ಎಂಟು ತಿಂಗಳ ಗರ್ಭಿಣಿಯಾಗಿದ್ದಾರೆ. ಹನುಮಂತ ಅವರ ಹಠಾತ್ ನಿಧನದಿಂದ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ‌.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net