ಕಲಾವಿದರಿಗೆ ಮಾಸಾಶನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

Published on

ಹಾವೇರಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಾಗೂ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರಿಂದ ಮಾಸಾಶನ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಕಲಾವಿದರು 58 ವರ್ಷ ಮೇಲ್ಪಟ್ಟವರಾಗಿರಬೇಕು. ಅರ್ಹ ಕಲಾವಿದರು ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪಡೆದು, ಜನ್ಮದಿನಾಂಕ ಸೇರಿದಂತೆ ಅಗತ್ಯ ದಾಖಲೆಗಳೊಂದಿಗೆ ಭರ್ತಿಮಾಡಿದ ಅರ್ಜಿಯನ್ನು ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಆರ್.ವಿ.ಚಿನ್ನಿಕಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net