ನವೆಂಬರ್ 1ರಂದು 68ನೇ ಕರ್ನಾಟಕ ರಾಜ್ಯೋತ್ಸವ

Published on

ಹಾವೇರಿ: ಜಿಲ್ಲಾಡಳಿತದಿಂದ 68ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ನವೆಂಬರ್ 1ರಂದು ಬೆಳಗ್ಗೆ 9 ಗಂಟೆಗೆ ನಗರದ ದಿ.ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಲಿದೆ.
ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶನಾಲಯ ಹಾಗೂ ಕೃಷಿ ಮಾರುಕಟ್ಟೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಅವರು ಧ್ವಜಾರೋಹಣ ನೆರವೇರಿಸಿ, ಸಂದೇಶ ನೀಡಲಿದ್ದಾರೆ. ವಿಧಾನಸಭಾ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲೆಯ ಸಂಸದರು, ಶಾಸಕರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮ ವಿವರ: ನ.1ರಂದು ಬೆಳಗ್ಗೆ 7.45ಕ್ಕೆ ಹುತಾತ್ಮ ಮೈಲಾರ ಮಹದೇವ ಪುತ್ಥಳಿಗೆ ಮಾಲಾರ್ಪಣೆ, 8 ಗಂಟೆಗೆ ವಿವಿಧ ಇಲಾಖಾ ಸ್ತಬ್ಧಚಿತ್ರಗಳೊಂದಿಗೆ ತಾಯಿ ಭುವನೇಶ್ವರಿ ಭಾವಚಿತ್ರದ ಮೆರವಣಿಗೆ, ಕರ್ನಾಟಕ ಸಂಭ್ರಮ 50ರ ಅಂಗವಾಗಿ ನುಡಿನಮನ(ಗೀತ ಗಾಯನ), ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಸಾಧಕರಿಗೆ ಸನ್ಮಾನ ಹಾಗೂ ಸಂಜೆ 5.30ಕ್ಕೆ ಜಿಲ್ಲಾ ಗುರು ಭವನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net