ಮಹಿಳೆಯರು ಸಮಾಜದಲ್ಲಿ ಸೃಢರಾಗಬೇಕು; ನ್ಯಾಯಾಧೀಶ ಕೆ.ಸಿ.ಸದಾನಂದಸ್ವಾಮಿ ಸಲಹೆ

8 HVR 2
Published on

ಹಾವೇರಿ: ಮಹಿಳೆಯರು ಸಮಾಜದಲ್ಲಿ ಸದೃಢರಾಗಬೇಕು ಹಾಗೂ ಕಾನೂನು ಅರಿವು ಹೊಂದಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಕೆ.ಸಿ.ಸದಾನಂದಸ್ವಾಮಿ ಹೇಳಿದರು.
ನಗರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಭಾಭವನದಲ್ಲಿ ಶನಿವಾರ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಷ್ಟ್ರೀಯ ಮಹಿಳಾ ಆಯೋಗ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಹಾಯಕ ಕಾನೂನು ನೆರವು ಅಭಿರಕ್ಷಣಾ ವಕೀಲ ಎನ್.ಎನ್.ಡಿಳ್ಳೆಪ್ಪನವರ, ಭಾರತೀಯ ಸಂವಿಧಾನದಡಿಯಲ್ಲಿ ಮಹಿಳೆಯರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ಹಾಗೂ ಕಾರ್ಖಾನೆಗಳ ಕಾಯ್ದೆ 1948, ಮಹಿಳೆಯರ ವಿರುದ್ಧದ ಆಸಿಡ್ ದಾಳಿ, ಅತ್ಯಾಚಾರ, ಅಪಹರಣ, ಲೈಂಗಿಕ ದೌರ್ಜನ್ಯ ಅಪರಾಧಗಳ ಕುರಿತು ಹಾಗೂ ಮಾನವ ಕಳ್ಳಸಾಗಾಣಿಕೆ ಕುರಿತು ಉಪನ್ಯಾಸ ನೀಡಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪೆನಲ್ ವಕೀಲೆ ಕೆ.ಜಿ.ಕಿತ್ತೂರ ಅವರು ಭಾರತೀಯ ದಂಡ ಸಂಹಿತೆ ಮತ್ತು ಕೌಂಟುಬಿಕ ದೌರ್ಜನ್ಯದಿಂದ ಮಹಿಳೆಯರ ಸಂರಕ್ಷಣೆ ಕಾಯ್ದೆ, ಕ್ರೌರ್ಯ ಮತ್ತು ವರದಕ್ಷಿಣೆ ಕಿರುಕುಳ ಕುರಿತು ಉಪನ್ಯಾಸ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಆಲದರ್ತಿ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ದಿವಾಣಿ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿ ಬಾಲಮುಕುಂದ ರಮೇಶರಾವ್ ಮುತಾಲಿಕದೇಸಾಯಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಸ್.ಎಚ್.ಜತ್ತಿ ಹಾಗೂ ಕಾರ್ಯದರ್ಶಿ ಪಿ.ಎಸ್.ಹೆಬ್ಬಾಳ, ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net