ಹಾವೇರಿ: ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಜುಲೈ 12ರಂದು ರಾಷ್ಟ್ರೀಯ ಲೋಕ ಅದಾಲತ್ ಜರುಗಲಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶೈಲಜಾ ಎಚ್.ವಿ. ತಿಳಿಸಿದ್ದಾರೆ.
ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳು ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇಚ್ಛಿಸಿದಲ್ಲಿ ಮುಂಚಿತವಾಗಿ ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್www.kslsa.kar.nic.in ಅಥವಾ ಸಹಾಯವಾಣಿ ಸಂಖ್ಯೆ 15100 ಸಂಪರ್ಕಿಸಲು ಕೋರಲಾಗಿದೆ.