ಕರ್ಜಗಿ ಸಸ್ಯಪಾಲನಾಲಯದ ಆವರಣದಲ್ಲಿ ಎಲ್ಲೆಂದರಲ್ಲಿ ಮದ್ಯದ ಬಾಟಲಿ

3 HVR 9
Published on

ಹಾವೇರಿ: ತಾಲೂಕು ಕರ್ಜಗಿಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ಸಸ್ಯಪಾಲನಾಲಯದ ಆವರಣದಲ್ಲಿ ಎಲ್ಲೆಂದರಲ್ಲಿ ಮದ್ಯ ಹಾಗೂ ಕುಡಿಯುವ ನೀರಿನ ಖಾಲಿ ಬಾಟಲಿಗಳನ್ನು ಎಸೆಯಲಾಗಿದೆ. ಇದರಿಂದ ಇಲ್ಲಿನ ಸುಂದರ ಪರಿಸರಕ್ಕೆ ದಕ್ಕೆಯಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಜರುಗಿಸಬೇಕಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net