ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಕರ್ಜಗಿ ವಸತಿ ಶಾಲೆ ಮಕ್ಕಳು

14 HVR 8
Published on

ಹಾವೇರಿ: ನಗರದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಕರ್ಜಗಿ ಅಲ್ಪಸಂಖ್ಯಾತರ ಮುರಾರ್ಜಿ ದೇಸಾಯಿ ವಸತಿ ಕಾಲೇಜ್‌ನ 14 ವಿದ್ಯಾರ್ಥಿಗಳು ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಬಾಸ್ಕೇಟ್‌ಬಾಲ್, 100 ಮೀಟರ್ ಹರ್ಡಲ್ಸ್, ಕುಸ್ತಿ, ಕರಾಟೆ, ಯೋಗ, ಜಂಪ್ ರೋಪ್ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಅಶೋಕ ಗಡ್ಡಿಗೌಡರ, ಪ್ರಾಚಾರ್ಯೆ ನೀಲವ್ವ ಮೇಟಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net