ಹಾವೇರಿಯಲ್ಲಿ ಕರ್ನಾಟಕ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

29 HVR 2 D
Published on

ಹಾವೇರಿ: ಹಾವೇರಿಯಲ್ಲಿ ಕರ್ನಾಟಕ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಶಾಲಾ- ಕಾಲೇಜುಗಳು, ವ್ಯಾಪಾರ ವಹಿವಾಟು ಎಂದಿನಂತಿದೆ. ಬೆಳಗ್ಗೆಯಿಂದಲೇ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಸೇರಿದ ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ರಾಷ್ಟ್ರೀಯ ಹೆದ್ದಾರಿ ಸಂಚಾರ ತಡೆಯಲು ಮುಂದಾದ ೭೦ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿ, ಬಿಡುಗಡೆಗೊಳಿಸಿದರು.

ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಗಿರೀಶ ಬಾರ್ಕಿ, ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ ಜಿಲ್ಲಾಧ್ಯಕ್ಷ ಮಂಜುನಾಥ ಓಲೇಕಾರ, ಜಯ ಕರ್ನಾಟಕ ಜಿಲ್ಲಾಧ್ಯಕ್ಷ ಸುಭಾಷ ಬೆಂಗಳೂರು, ಮಹ್ಮದ್ ಯೂಸೂಫ್ ಸೈಕಲಗಾರ, ಧ್ಯಾಮಣ್ಣ ಮಲ್ಲಾಡದ, ಮಹಾಂತೇಶ ಜಿ.ಕೆ., ಶಂಕರ ಬಡಿಗೇರ, ಕುಮಾರ ಸುಳ್ಳನವರ, ರಾಮಚಂದ್ರಪ್ಪ ಹಿಂಡಸಗಟ್ಟಿ, ಸೇರಿದಂತೆ ಇತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net