ಕರ್ನಾಟಕ ಒನ್ ಸೇವಾ ಕೇಂದ್ರ ಆರಂಭಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

Published on

ಹಾವೇರಿ: ಜಿಲ್ಲೆಯ ಐದು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಕರ್ನಾಟಕ ಒನ್ ಸೇವಾ ಕೇಂದ್ರಗಳನ್ನು ಪ್ರಾಂಚೈಸಿಗಳ ಮೂಲಕ ಆರಂಭಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸಲು ಕರ್ನಾಟಕ ಒನ್ ಸೇವಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ರಾಣೆಬೆನ್ನೂರ, ಹಾನಗಲ್ಲ, ಬ್ಯಾಡಗಿ, ಶಿಗ್ಗಾಂವಿ ಹಾಗೂ ಬಂಕಾಪುರದಲ್ಲಿ ಕರ್ನಾಟಕ ಒನ್ ಸೇವಾ ಕೇಂದ್ರ ಆರಂಭಿಸಲು ಆಸಕ್ತ ಅಭ್ಯರ್ಥಿಗಳು ಜನವರಿ 2ರೊಳಗಾಗಿ https://www.karnatakaone.gov.in/Public/FranchiseeTermas ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಇನ್ನಾವುದೇ ರೀತಿಯಲ್ಲಿ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿವುದಿಲ್ಲವೆಂದು ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net