ಕೆಎಎಸ್ ಅಧಿಕಾರಿಗಳ ವರ್ಗಾವಣೆ, ಎಡಿಸಿ ಹುದ್ದೆಗೆ ಡಾ.ನಾಗರಾಜ, ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಪೂಜಾರ ವೀರಮಲ್ಲಪ್ಪ ನೇಮಕ

Pujar Veeramallappa
Published on

ಹಾವೇರಿ: ರಾಜ್ಯ ಸರ್ಕಾರ ಹಲವು ಕೆಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಮಂಗಳವಾರ ಆದೇಶಿಸಿದ್ದು, ಡಾ.ನಾಗರಾಜ ಎಲ್. ಅವರನ್ನು ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯನ್ನಾಗಿ ನೇಮಿಸಿದೆ.
ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿದ್ದ ಡಾ.ನಾಗರಾಜ ಅವರನ್ನು ಅಪರ ಜಿಲ್ಲಾಧಿಕಾರಿ ಸ್ಥಾನಕ್ಕೆ ವರ್ಗಾಯಿಸಿದ್ದು, ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಅವರನ್ನು ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಹುದ್ದೆಗೆ ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net