ಕನ್ನಡ ಪ್ರವೇಶ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ

Published on

ಹಾವೇರಿ: ಕನ್ನಡ ಸಾಹಿತ್ಯ ಪರಿಷತ್ತು 2023-24ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ ಹಾಗೂ ರತ್ನ ಪರೀಕ್ಷೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪರೀಕ್ಷೆಗಳು ಡಿಸೆಂಬರ್ ಕೊನೆಯ ವಾರದಲ್ಲಿ ನಡೆಯಲಿವೆ. ಈ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಲು 2023 ಆಗಸ್ಟ್ 31 ಕೊನೆಯ ದಿನವಾಗಿದೆ. 2023 ಸೆಪ್ಟೆಂಬರ್ 15ರವರೆಗೆ ದಂಡ ಶುಲ್ಕ 50 ರೂ. ಹೆಚ್ಚುವರಿಯಾಗಿ ನೀಡಿ ಅರ್ಜಿ ಸಲ್ಲಿಸಬಹುದು.
ಪರೀಕ್ಷಾ ನಿಯಮಾವಳಿ ಅರ್ಜಿಯನ್ನು 25 ರೂ. ಶುಲ್ಕ ಪಾವತಿಸಿ, ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಮಾರಾಟ ಮಳಿಗೆಯಲ್ಲಿ ಪಡೆಯಬಹುದು. ಅಥವಾ ‘ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು’ ಈ ಹೆಸರಿಗೆ ಮೂವತ್ತು ರೂಪಾಯಿ ಮನಿಯಾರ್ಡರ್ ಮಾಡಿದರೆ ಅರ್ಜಿ ನಮೂನೆಯನ್ನು ತಾವು ನೀಡಿದ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸಲಾಗುವುದು. ಪರೀಕ್ಷಾ ಅರ್ಜಿಗಳನ್ನು ಅಂತರ್ಜಾಲ ತಾಣ ಡಿಡಿಡಿ..ಜ್ಞಿ ದ ಮೂಲಕ ಪಡೆದುಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು-560018 ಇವರನ್ನು ಸಂಪರ್ಕಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net