

ಹಾವೇರಿ: ನಗರದ ಹೊರವಲಯದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಚೇರಿಯಲ್ಲಿ ಭಾನುವಾರ ಪರಿಷತ್ತಿನ ಕಾರ್ಯಕಾರಿ ಮಂಡಳಿ ಸಭೆ ಜರುಗಿತು.
ಸಭೆಯಲ್ಲಿ ಇತ್ತೀಚೆಗೆ ನಿಧನರಾದ ಸಾಹಿತಿ ಎಚ್.ಎಸ್ ವೆಂಕಟೇಶಮೂರ್ತಿ ಅವರಿಗೆ ಸಂತಾಪ ಸೂಚಿಸಲಾಯಿತು. ಕನ್ನಡ ಭಾಷೆ ಬಗ್ಗೆ ಹಗುರವಾಗಿ ಮಾತನಾಡಿದ ನಟ ಕಮಲ್ ಹಾಸನ್ ಹೇಳಿಕೆ ಖಂಡಿಸಲಾಯಿತು. ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ ಅವರಿಗೆ ನೀಡಿದ್ದ ಸಚಿವ ಸಂಪುಟ ದರ್ಜೆಯ ಸ್ಥಾನವನ್ನು ಹಿಂಪಡೆದಿರುವ ರಾಜ್ಯ ಸರ್ಕಾರ ತನ್ನ ನಿಲುವನ್ನು ಪುನರ್ ಪರಿಶೀಲಿಸಬೇಕೆಂದು ಮನವಿ ಮಾಡಲಾಯಿತು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಲಿಂಗಯ್ಯ ಬಿ. ಹಿರೇಮಠ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲೆಯ ವಿವಿಧ ತಾಲೂಕುಗಳ ಕಸಾಪ ಅಧ್ಯಕ್ಷರಾದ ಬಿ.ಎಂ ಜಗಾಪುರ, ಎನ್.ಸುರೇಶಕುಮಾರ, ವೈ.ಬಿ ಆಲದಕಟ್ಟಿ, ಸಿ.ಎನ್ ಪಾಟೀಲ, ನಾಗಪ್ಪ ಬೆಂತೂರ, ರಾಜು ಹರವಿಶೆಟ್ಟರ, ಷಣ್ಮುಖಪ್ಪ ಮುಚ್ಚಂಡಿ, ಪ್ರಭಾಕರ ಶಿಗ್ಲಿ ಹಾಗೂ ಎಲ್ಲ ಹೋಬಳಿ ಘಟಕಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.