ಹಾವೇರಿ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಅಕ್ಟೋಬರ್ 21, 22ರಂದು ನಾಡಹಬ್ಬವನ್ನು ಆಚರಿಸಲು ತೀರ್ಮಾನಿಸಲಾಗಿದೆ. ನಾಡಹಬ್ಬ ಉತ್ಸವ ಸಮಿತಿ ಅಧ್ಯಕ್ಷರಾಗಿ ನಗರಸಭೆ ಸದಸ್ಯ ಬಸವರಾಜ ಬೆಳವಡಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
ಜಿಲ್ಲಾ ಗುರುಭವನದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ನಾಡಹಬ್ಬದ ವಿವಿಧ ಸಮಿತಿಗಳನ್ನು ಆಯ್ಕೆ ಮಾಡಲಾಗಿದೆ. ಜಿಲ್ಲಾ ಗುರು ಭವನದಲ್ಲಿ ನಡೆಯುವ ನಾಡಹಬ್ಬ ಕಾರ್ಯಕ್ರಮದಲ್ಲಿ ನಾಡು, ನುಡಿ, ನೆಲ, ಜಲ, ಸಂಸ್ಕೃತಿ, ಪರಂಪರೆಯ ಕುರಿತು ಉಪನ್ಯಾಸ, ವಿಚಾರಗೋಷ್ಠಿ ಹಾಗೂ ನಾಡಿನ ಸಮೃದ್ಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಕೋಶಾಧ್ಯಕ್ಷ ಎಸ್.ಎನ್.ದೊಡ್ಡಗೌಡರ, ಸಾಹಿತಿ ಸತೀಶ ಕುಲಕರ್ಣಿ, ತಾಲೂಕು ಕಸಾಪ ಅಧ್ಯಕ್ಷ ವೈ.ಬಿ.ಆಲದಕಟ್ಟಿ, ಶಂಕರ ಸುತಾರ, ಅಮೃತಮ್ಮ ಶೀಲವಂತರ, ದಾಕ್ಷಾಯಣಿ ಗಾಣಗೇರ, ಚಂಪಾ ಹುಣಸಿಕಟ್ಟಿ, ಎನ್.ಬಿ.ಕಾಳೆ, ಪೃಥ್ವಿರಾಜ ಬೆಟಗೇರಿ, ಶಿವಬಸವ ಮರಳಿಹಳ್ಳಿ, ವಿ.ಪಿ.ದ್ಯಾಮಣ್ಣವರ, ಪಿ.ಕೆ.ಕರ್ಜಗಿ, ಎಸ್.ಎಲ್.ಕಾಡದೇವರಮಠ ಮತ್ತಿತರರು ಉಪಸ್ಥಿತರಿದ್ದರು.