ಕಾಯಕ ಶರಣರ ಜಯಂತಿ ಕಾರ್ಯಕ್ರಮ 10ರಂದು

Published on

ಹಾವೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಕಾಯಕ ಶರಣರಾದ ಮಾದಾರ ಚೆನ್ನಯಯ್ಯ, ಡೋಹರ ಕಕ್ಕಯ್ಯ, ಸಮಗಾರ ಹರಳಯ್ಯ, ಮಾದಾರ ದೂಳಯ್ಯ ಹಾಗೂ ಉರಿಲಿಂಗ ಪೆದ್ದಿಯವರ ಜಯಂತಿ ಕಾರ್ಯಕ್ರಮ ಫೆ.10ರಂದು ಬೆಳಗ್ಗೆ 10 ಗಂಟೆಗೆ ನಗರದ ಹೊಸಮಠದಲ್ಲಿ ಜರುಗಲಿದೆ.
ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವರಾದ ಶಿವಾನಂದ ಪಾಟೀಲ ಉದ್ಘಾಟಿಸಲಿದ್ದಾರೆ. ವಿಧಾನಸಭಾ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅಧ್ಯಕ್ಷತೆ ವಹಿಸಲಿದ್ದಾರೆ. ಉಪನ್ಯಾಸಕರಾಗಿ ಲಿಡ್ಕರ್ ನಿಗಮದ ಮಾಜಿ ಉಪಾಧ್ಯಕ್ಷ ಡಿ.ಎಸ್.ಮಾಳಗಿ ಹಾಗೂ ಶಿವಬಸಪ್ಪ ಮುದ್ದಿ ಭಾಗವಹಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net