ತ್ರೈಮಾಸಿಕ ಕೆಡಿಪಿ ಸಭೆ 8ರಂದು

Published on

ಹಾವೇರಿ: ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಕುರಿತು ತ್ರೈಮಾಸಿಕ ಕೆಡಿಪಿ ಸಭೆ ಏ.8ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ.

ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಅಧ್ಯಕ್ಷತೆಯಲ್ಲಿ ಸಭೆ ಜರುಗಲಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಕೆಡಿಪಿ ತ್ರೈಮಾಸಿಕ ಸಭೆ ಸದಸ್ಯ ಕಾರ್ಯದರ್ಶಿ ರುಚಿ ಬಿಂದಾಲ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net