ಹಾವೇರಿ: ಭಾರತೀಯ ಕಿಸಾನ್ ಸಂಘ ಹಾವೇರಿ ಜಿಲ್ಲಾ ಘಟಕದ ಸಹಯೋಗದಲ್ಲಿ ಜು.31ರಂದು ನಗರದ ಹೆಗ್ಗೇರಿ ರಸ್ತೆಯಲ್ಲಿರುವ ದಾನೇಶ್ವರಿ ನಗರದ ಶಿವಜ್ಯೋತಿ ಮಕ್ಕಳ ಆಸ್ಪತ್ರೆಯ ಹಿಂಭಾಗದಲ್ಲಿರುವ ಭಂಟರ ಭವನದಲ್ಲಿ ರೈತರಿಗಾಗಿ ಪ್ರಧಾನಮಂತ್ರಿ ಫಸಲ್ ಭೀಮಾ ಬೆಳೆವಿಮೆ ಜಾಗೃತಿ ಕುರಿತು ಒಂದು ದಿನದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.
ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ.ಕೆ.ಮಲ್ಲಿಕಾರ್ಜುನ ಅತಿಥಿಯಾಗಿ ಭಾಗವಹಿಸುವರು. ಕೃಷಿ ತಾಂತ್ರಿಕ ಅಧಿಕಾರಿ ಅರುಣಕುಮಾರ ವಿಶೇಷ ಉಪನ್ಯಾಸ ನೀಡುವರು. ಶ್ರೀನಿವಾಸ ಭಟ್ ಶಿವಪೂಜಿ ಅಧ್ಯಕ್ಷತೆ ವಹಿಸುವರು. ಯೋಜನೆಯ ಬಗೆಗೆ ಸಂಪೂರ್ಣ ಮಾಹಿತಿ ಪಡೆಯುವುದಕ್ಕಾಗಿ ಜಿಲ್ಲೆಯ ಎಲ್ಲ ತಾಲೂಕುಗಳ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಾಗಾರದಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾ ಘಟಕದ ಕಾರ್ಯದರ್ಶಿ ಮಹಾದೇವಪ್ಪ ತಾವರಗೊಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.