ಕಿತ್ತೂರ ರಾಣಿ ಚನ್ನಮ್ಮ ಜಯಂತಿ 27ರಂದು

17 HVR 3
Published on

ಹಾವೇರಿ: ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಮಟ್ಟದಲ್ಲಿ ಅ.27ರಂದು ಕಿತ್ತೂರ ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮದ ಅರ್ಥಪೂರ್ಣ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಸೂಚಿಸಿದರು.
ಇಲ್ಲಿನ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಸೋಮವಾರ ಕಿತ್ತೂರ ರಾಣಿ ಚೆನ್ನಮ್ಮ ಜಯಂತಿ ಆಚರಣೆಯ ಪೂರ್ವ ಸಿದ್ಧತೆ ಕುರಿತ ಸಭೆಯಲ್ಲಿ ಅವರು ಮಾತನಾಡಿದರು. ಅ.23ರಂದು ನಗರದ ಕಿತ್ತೂರ ರಾಣಿ ಚೆನ್ನಮ್ಮ ವೃತ್ತಕ್ಕೆ ಮಾಲಾರ್ಪಣೆ ಕಾರ್ಯಕ್ರಮ ಹಾಗೂ ಅ.27ರಂದು ಬೆಳಗ್ಗೆ 11.30ಕ್ಕೆ ಗುರುಭವನದಲ್ಲಿ ಕಿತ್ತೂರ ರಾಣಿ ಚೆನ್ನಮ್ಮ ಜಯಂತಿ ಆಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲು ಸಮಾಜದ ಮುಖಂಡರೊಂದಿಗೆ ಚರ್ಚಿಸಿ ನಿರ್ಧರಿಸಿದರು.
ಕಾರ್ಯಕ್ರಮದಲ್ಲಿ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ, ವಿಶೇಷ ಉಪನ್ಯಾಸ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲು ನಿರ್ಣಯಿಸಲಾಯಿತು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಗೋಪಾಲ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರಬಾಬು ಬೆಕ್ಕೇರಿ, ಸಮಾಜದ ಮುಖಂಡರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net