ಐಶ್ವರ್ಯ ಮಾನೇಗಾರಗೆ ಡಾ.ಡಿ.ಸಿ.ಪಾವಟೆ ಅತ್ಯುತ್ತಮ ಸ್ವಯಂಸೇವಕಿ ಪ್ರಶಸ್ತಿ

2 HVR 4
Published on

ಹಾವೇರಿ: ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಕೋಶದ ವತಿಯಿಂದ ಇತ್ತೀಚೆಗೆ ಆಯೋಜಿಸಿದ್ದ ವಾರ್ಷಿಕ ಸಮಾರಂಭದಲ್ಲಿ ಹಾವೇರಿಯ ಕೆಎಲ್‌ಇ ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದ ಎನ್.ಎಸ್.ಎಸ್. ಸ್ವಯಂಸೇವಕಿ ಐಶ್ವರ್ಯ ಮಾನೇಗಾರಗೆ 2021-2022ನೇ ಸಾಲಿನ ಡಾ.ಡಿ.ಸಿ.ಪಾವಟೆ ಅತ್ಯುತ್ತಮ ಸ್ವಯಂಸೇವಕಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ಸಂಧ್ಯಾ ಕುಲಕರ್ಣಿ ಅವರನ್ನು ಸನ್ಮಾನಿಸಲಾಯಿತು. ಕವಿವಿ ಕುಲಪತಿ ಪ್ರೊ.ಕೆ.ಬಿ.ಗುಡಸಿ, ಎನ್.ಎಸ್.ಎಸ್. ಪ್ರಾಂತೀಯ ಯುವಾಧಿಕಾರಿ ವೈ.ಎಂ.ಉಪ್ಪಿನ, ಕುಲಸಚಿವರಾದ ಪ್ರೊ.ಚಂದ್ರಮ್ಮ ಎಂ., ಪ್ರೊ.ಸಿ.ಕೃಷ್ಣಮೂರ್ತಿ, ಕಾರ್ಯಕ್ರಮ ಸಂಯೋಜನಾಧಿಕಾರಿ ಪ್ರೊ.ಎಂ.ಬಿ.ದಳಪತಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net