ಸತತ ಪ್ರಯತ್ನದಿಂದ ಯಶಸ್ಸು ಸಾಧ್ಯ; ಭಾರತ ಸ್ಕೌಟ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯಾ ಹೇಳಿಕೆ

5 HVR 5
Published on

ಹಾವೇರಿ: ಜೀವನದಲ್ಲಿ ಅವಕಾಶಗಳು ಸಿಗುತ್ತವೆ. ಆದರೆ, ನಾವು ಪ್ರಯತ್ನಿಸಿದರೆ ಮಾತ್ರ ಯಶಸ್ಸು ಸಾಧ್ಯವಾಗುತ್ತದೆ. ಸಮಯಪ್ರಜ್ಞೆಯಿಂದ ಮತ್ತು ಸತತ ಪ್ರಯತ್ನದಿಂದ ಯಶಸ್ಸು ಸಿಗುತ್ತದೆ ಎಂದು ಭಾರತ ಸ್ಕೌಟ್ ಮತ್ತು ಗೈಡ್ಸ್‌ನ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯಾ ಹೇಳಿದರು.
ನಗರದ ಕೆ.ಎಲ್.ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದ ರೋವರ್ ರೇಂಜರ್ಸ್ ಘಟಕ ಮತ್ತು ಜಿಲ್ಲಾ ಸ್ಕೌಟ್ ಮತ್ತು ಗೈಡ್ಸ್ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಿದ್ದ ರಾಜ್ಯ ಪುರಸ್ಕಾರ ಪುರಸ್ಕೃತರಿಗೆ ಪ್ರಮಾಣ ಪತ್ರ ವಿತರಣಾ ಸಮಾರಂಭದಲ್ಲಿ ಜಿಲ್ಲೆಯ 256 ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಅವರು ಮಾತನಾಡಿದರು.
ಡಿಡಿಪಿಐ ಮತ್ತು ಸ್ಕೌಟ್ ಗೈಡ್ಸ್‌ನ ಜಿಲ್ಲಾ ಆಯುಕ್ತ ಸುರೇಶ ಹುಗ್ಗಿ ಮಾತನಾಡಿ, ಸ್ಕೌಟ್ ಸಂಘಟನೆಯು ಉತ್ತಮ ನಾಗರಿಕರನ್ನು ನಿರ್ಮಿಸುವುದರಲ್ಲಿ ಮಹತ್ತರ ಪಾತ್ರ ವಹಿಸುತ್ತದೆ ಎಂದು ಹೇಳಿದರು.
ಸ್ಕೌಟ್ ಉಪ ಆಯುಕ್ತ ಮತ್ತು ಹಾವೇರಿ ಡಯಟ್ ಪ್ರಾಂಶುಪಾಲ ಗಿರೀಶ ಪದಕಿ ಮಾತನಾಡಿ, ಸ್ಕೌಟ್ ತರಬೇತಿಯಿಂದ ಉನ್ನತ ವ್ಯಾಸಂಗದಲ್ಲಿ ಮೀಸಲಾತಿ ಸಿಗುತ್ತದೆ. ಅದರ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಸ್ಥಾನಿಕ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಡಾ.ಎಸ್.ಎಲ್.ಬಾಲೆಹೊಸೂರ ಮಾತನಾಡಿ, ಪ್ರತಿ ವಿದ್ಯಾರ್ಥಿಯೂ ಸ್ಕೌಟ್ ತರಬೇತಿಯನ್ನು ಪಡೆದು ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಬೇಕೆಂದರು.
ಜಿಲ್ಲಾ ಮುಖ್ಯ ತರಬೇತಿ ಆಯುಕ್ತ ಆರ್.ಪಾಟೀಲ, ಕಾಲೇಜಿನ ಸ್ಥಾನಿಕ ಮಂಡಳಿಯ ಸದಸ್ಯ ಬಸವರಾಜ ಮಾಸೂರ, ಮಲ್ಲೇಶಪ್ಪ ಕೆ.ಟಿ., ಇತರರಿದ್ದರು.
ಪ್ರಾಚಾರ್ಯೆ ಡಾ.ಸಂಧ್ಯಾ ಆರ್. ಕುಲಕರ್ಣಿ ಸ್ವಾಗತಿಸಿದರು. ಪ್ರೊ.ಹೇಮಂತ ಸಿ.ಎನ್. ಪರಿಚಯಿಸಿದರು. ಡಾ.ಎಂ.ಪಿ.ಕಣವಿ ಪ್ರಮಾಣ ಪತ್ರ ವಿತರಣಾ ಸಮಾರಂಭ ನಡೆಸಿಕೊಟ್ಟರು. ಪ್ರೊ.ಪೂಜಾ ಎಂ. ವಂದಿಸಿದರು. ಶ್ರೀ ದೇವಿ ದೊಡ್ಡಮನಿ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net