ಶಮಂತಕುಮಾರ್‌ಗೆ ಪಿಎಎಚ್‌ಡಿ

5 Shamantkumar
Published on

ಹಾವೇರಿ: ಇಲ್ಲಿಯ ಕೆಎಲ್‌ಇ ಗುದ್ಲೆಪ್ಪ ಹಳ್ಳಿಕೇರಿ ಪದವಿ ಮಹಾವಿದ್ಯಾಲಯದ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ, ಹವ್ಯಾಸಿ ಯಕ್ಷಗಾನ ಕಲಾವಿದ, ರಂಗನಟ, ರಂಗನಿರ್ದೇಶಕ ಶಮಂತಕುಮಾರ ಕೆ.ಎಸ್.ಗೆ ಹಂಪಿಯ ಕನ್ನಡ ವಿಶ್ವವಿದ್ಯಾಲಯ ಪಿಎಚ್‌ಡಿ ಪದವಿ ಪ್ರಧಾನ ಮಾಡಿದೆ.

ಮೂಲತಃ ಉಡುಪಿ ಜಿಲ್ಲೆಯ ಕೋಟ ಗ್ರಾಮದ ಶಮಂತಕುಮಾರ ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಮೂಲಕ ‘ಕನ್ನಡದಲ್ಲಿ ಠಾಕೂರ ನಾಟಕಗಳು: ಬಿಡುಗಡೆಯ ಕಥನಗಳು’ ಎಂಬ ಸಂಶೋಧನಾ ಮಹಾಪ್ರಬಂಧ ಮಂಡಿಸಿದ್ದರು. ಡಾ.ಶಿವರಾಮ ಕಾರಂತ ಟ್ರಸ್ಟ್ ಅಧ್ಯಕ್ಷ ಡಾ.ಗಣನಾಥ ಶೆಟ್ಟಿ ಎಕ್ಕಾರು ಮಾರ್ಗದರ್ಶನ ನೀಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net