ಐಶ್ವರ್ಯಗೆ ರಾಜ್ಯ ಮಟ್ಟದ ಉತ್ತಮ ಸ್ವಯಂಸೇವಕಿ ಪ್ರಶಸ್ತಿ

12 HVR 8
Published on

ಹಾವೇರಿ: ನಗರದ ಕೆ.ಎಲ್.ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದ ಎನ್.ಎಸ್.ಎಸ್. ಘಟಕದ ಸ್ವಯಂ ಸೇವಕಿ ಐಶ್ವರ್ಯ ಮಾನೇಗಾರ 2021-22ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಸ್ವಯಂಸೇವಕಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಬೆಂಗಳೂರಿನ ರಾಜಭವನದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ರಾಜ್ಯ ಸರ್ಕಾರದ ಅಧೀನ ರಾಜ್ಯ ಎನ್.ಎಸ್.ಎಸ್. ಕೋಶ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಇತ್ತೀಚೆಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net