ಕೆಎಲ್‌ಇ ಶಾಲೆಯ ನವ್ಯಾ ಪವಾರ ಜಿಲ್ಲೆಗೆ ಪ್ರಥಮ: ಸಿಬಿಎಸ್‌ಸಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

Published on

ಹಾವೇರಿ: ಪ್ರಸಕ್ತ 2024-25ನೇ ಸಾಲಿನ ಸಿಬಿಎಸ್‌ಇ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ನಗರದ ಕೆ.ಎಲ್.ಇ. ಸಂಸ್ಥೆಯ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಶೇ.100ರಷ್ಟು ಫಲಿತಾಂಶ ದಾಖಲಿಸಿದೆ. ಶಾಲೆಯ ವಿದ್ಯಾರ್ಥಿನಿ ನವ್ಯಾ ಪವಾರ (ಶೇ.97.02) ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಪರೀಕ್ಷೆಗೆ ಒಟ್ಟು 98 ವಿದ್ಯಾರ್ಥಿಗಳು ಹಾಜರಾಗಿದ್ದು, ಎಲ್ಲ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಪೈಕಿ 57 ವಿದ್ಯಾರ್ಥಿಗಳು ಅತ್ಯುನ್ನತ (ಡಿಸ್ಟಿಂಕ್ಷನ್) ಶ್ರೇಣಿಯಲ್ಲಿ, 20 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 21 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ನವ್ಯಾ ಪವಾರ (ಶೇ.97.02) ಜಿಲ್ಲೆ ಹಾಗೂ ಶಾಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಸಮರ್ಥ ಬಿಂಕದಕಟ್ಟಿ (ಶೇ.94.08) ದ್ವಿತೀಯ ಹಾಗೂ ಶ್ರೇಯಾ ಎಸ್.ಕೆ. ಮತ್ತು ಎಚ್.ಫತೇಹ ಮೊಹಮ್ಮದ್ (ಶೇ.94.4) ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಪ್ರಾಂಶುಪಾಲರು, ಆಡಳಿತ ಮಂಡಳಿ, ಶಿಕ್ಷಕರು ಹಾಗೂ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net